ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ಯೋಗ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಮನೆಯಲ್ಲೇ ಇದ್ದು ಯೋಗ ಆಚರಿಸಿ, ಸ್ವಾಸ್ಥ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ಯೋಗ ಮಾಡುವ ಮೂಲಕ ಯೋಗಾ ಡೇಗೆ ಚಾಲನೆ ನೀಡಿದರು.
ಬಳಿಕ ಪ್ರಧಾನಿ ಮೋದಿ ಅವರ ವರ್ಚುವಲ್ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಇನ್ನು ಕಂಠೀಣ್ರವ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಬಿಎಸ್ ವೈ ಆನ್ ಲೈನ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಶುಭ ಕೋರಿರುವ ಸಿಎಂ, ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾದದು. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ