*ಗುಪ್ತಚರ ಇಲಾಖೆಯಿಂದ ಎಚ್ಚರಿಕೆ: ಅಧಿವೇಶನದ ವೇಳೆ ಭದ್ರತೆ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯಿಂದ ಎಚ್ಚರಿಕೆಯ ಸಂದೇಶ ಬಂದ ಎಚ್ಚರಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳು ಹೈಅಲರ್ಟ್ ಆಗಿವೆ. ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲು ಸರ್ಕಾರ ತೀರ್ಮಾನಿಸಿದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಮೊಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಭೂಷಣ್ ಬೋರಸೆ, ಎಸ್ಪಿ ಡಾ. ಭೀಮಾಶಂಕರ ಗುಳೇದ್ ಹಾಗೂ ಸಿಇಒ ರಾಹುಲ್ ಶಿಂಧೆ ಈಗಾಗಲೆ ಪರಿಶೀಲಿಸಿಲನೆ ನಡೆಸಿದ್ದು, ಅಧಿವೇಶನಕ್ಕೆ ಸಂಬಂಧಿಸಿದಂತೆ ಸುವರ್ಣ ವಿಧಾನಸೌಧದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಅಧಿವೇಶನ ಅವಧಿಯಲ್ಲಿ ಸುವರ್ಣ ಸೌಧ ಆವರಣದಲ್ಲಿ ಸಾಲು ಸಾಲು ಪ್ರತಿಭಟನೆಗಳು ಕೂಡ ನಡೆಯುತ್ತವೆ. ಹೀಗಾಗಿ ಪ್ರತಿದಿನ 50 ಸಾವಿರ ಜನ ಸೇರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಯಾವುದೇ ಅವಘಡವಾಗದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಸುವರ್ಣ ವಿಧಾನಸೌಧದ ಸುತ್ತಮುತ್ತ 3 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.



