*ಕಬ್ಬು ಬೆಲೆ ಹೋರಾಟ ತೀವ್ರ*: *ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ!*

ಪ್ರಗತಿವಾಹಿನಿ ಸುದ್ದಿ: ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್‌ನಿಂದ ರೈತರು ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭಿಸಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಆರಂಭವಾಗಿರುವ ಈ ಪಾದಯಾತ್ರೆಯಲ್ಲಿ ಕಬ್ಬು ಬೆಳೆಗಾರರು ರೈತರ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಮುನ್ನಡೆಯುತ್ತಿದ್ದಾರೆ. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಒಂದು ಬದಿಯಲ್ಲಿ ರೈತರು ಪಾದಯಾತ್ರೆ ನಡೆಸುತ್ತಿದ್ದಾರೆ. ಇಂದು ರಾತ್ರಿ ಬೆಳಗಾವಿ ತಾಲೂಕಿನ … Continue reading *ಕಬ್ಬು ಬೆಲೆ ಹೋರಾಟ ತೀವ್ರ*: *ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ!*