Belagavi NewsBelgaum NewsKannada News

*ಅಂತರಾಷ್ಟ್ರೀಯ ಮಾದಕ ವಸ್ತುಗಳ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ, ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ, ಕೆ.ಎಲ್.ಇ. ನರ್ಸಿಂಗ್ ಕಾಲೇಜು ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಹಿಂಡಲಗಾ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಾಗೂ ಅಕ್ರಮ ಸಾಗಾಣಿಕೆ ಕುರಿತು ಕೇಂದ್ರ ಕಾರಾಗೃಹ, ಹಿಂಡಲಗಾದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂದೀಪ ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇತ್ತಿಚಿನ ದಿನಗಳಲ್ಲಿ ಮಾದಕ ವಸ್ತುವಿನ ಚಟದಿಂದ ಯುವ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದು, ಸದರಿ ಪಿಡುಗನ್ನು ನಿರ್ಮೂಲನೆ ಮಾಡುವುದು ಅನಿವಾರ್ಯವಾಗಿದ್ದು, ಅದನ್ನು ಎಲ್ಲರೂ ಕೂಡಿಕೊಂಡು ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

Home add -Advt

ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಗೀತಾ ಕಾಂಬ್ಳೆ, ಬೆಳಗಾವಿ ಕೆ.ಎಲ್.ಇ ನರ್ಸಿಂಗ ಕಾಲೇಜಿನ ಸಹಾಯಕ ಉಪನ್ಯಾಸಕ ಸಂಗನಗೌಡರ, ಸಹಾಯಕ ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರ, ಆಡಳಿತಾಧಿಕಾರಿ ಬಿ. ಎಲ್. ಪೂಜಾರಿ, ಮುಖ್ಯ ಆರೋಗ್ಯಾಧಿಕಾರಿ ಡಾ. ಸಂಜಯ ಡುಮ್ಮಗೋಳ, ಹಿಂಡಲಗಾ ಕೇಂದ್ರ ಕಾರಾಗೃಹ ಮಾನಸಿಕ ವೈದ್ಯರಾದ ಡಾ. ಸರಸ್ವತಿ ತೇಣಗಿ ಅವರು ಉಪಸ್ಥಿತರಿದ್ದರು.

Related Articles

Back to top button