Belagavi NewsBelgaum NewsKannada NewsKarnataka NewsPolitics
*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೈಕ್ ಮತ್ತು ಸೈಕಲ್ ರ್ಯಾಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೆಪ್ಟೆಂಬರ್ 15 ರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ದಿನಾಂಕ: 14-09-2025 ರಂದು ಬೆಳಿಗ್ಗೆ 7.30 ಗಂಟೆಗೆ ಚೆನ್ನಮ್ಮ ವೃತ್ತದಿಂದ ಬೈಕ್ ಮತ್ತು ಸೈಕಲ್ ರ್ಯಾಲಿಗಳನ್ನು ಆಯೋಜಿಸಲಾಗಿದೆ.
ಬೈಕ್ ರ್ಯಾಲಿಯು ಚೆನ್ನಮ್ಮ ವೃತ್ತದಿಂದ ಪ್ರಾರಂಭವಾಗಿ ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ. ಅದೆ ತೆರನಾಗಿ ಸೈಕಲ್ ಕ್ಯಾಲಿಯು ನಗರದ ಚೆನ್ನಮ್ಮ ವೃತ್ತದಿಂದ ಪ್ರಾರಂಭವಾಗಿ ಸಂಭಾಜಿ ವೃತ್ತ, ಗೋಗಟೆ ವೃತ್ತ ಟಿಳಕವಾಡಿ ಮಾರ್ಗವಾಗಿ ಟಿಳಕವಾಡಿಯ 2ನೇ ರೇಲ್ವೆ ಗೇಟದಿಂದ ಮರಳಿ ಜಿಲ್ಲಾಧಿಕಾರಿಗಳ ಕಚೇರಿಗೆ ಅಂತ್ಯವಾಗಲಿದೆ.
ಇದೆ ದಿನ ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧ ಸೆಂಟ್ರಲ್ ಹಾಲ್ನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಜರುಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.