Kannada NewsKarnataka NewsLatestSports

*ಅಂತರಾಷ್ಟ್ರೀಯ ಕಬಡ್ಡಿ ಪಟು ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ಕಬಡ್ಡಿ ಪಟು ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನ ಆದರ್ಶ ನಗರದ ಮನೆಯಲ್ಲಿ ಪತ್ತೆಯಾಗಿದೆ.

25 ವರ್ಷದ ಧನಲಕ್ಷ್ಮಿ ಮೃತ ಕಬಡ್ಡಿ ಪಟು. ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ನಿವಾಸಿ. ಕಳೆದ 5 ವರ್ಷಗಳಿಂದ ನೆಲಮಂಗಲದ ಆದರ್ಶನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಾಡುಗೊಡಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

Home add -Advt

ಮಂಗಳವಾರ ಮೈಸೂರು ದಸರಾಗೆ ಹೋಗಿ ಬಂದಿದ್ದ ಧನಲಕ್ಷ್ಮೀ, ಈಗ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 3 ಬಾರಿ ಅಂತರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ತಂದೆ ಹಾಗೂ ತಮ್ಮ ಮನೆಯಲ್ಲಿರುವಗಲೇ ಧನಲಕ್ಷ್ಮೀ ತನ್ನ ರೂಮಿನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧನಲಕ್ಷ್ಮೀ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Related Articles

Back to top button