ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನ ಆಚರಣೆ
ಪ್ರಗತಿವಾಹಿನಿ ಸುದ್ದಿ: ಶುಕ್ರವಾರ ನನದಿ ಕ್ಯಾಂಪಸ್ ಆವರಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬಸವಜ್ಯೋತಿ ಯುಥ ಫೌಂಡೇಶನ್ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಜ್ಯೋತಿಪ್ರಸಾದ ಜೊಲ್ಲೆ ಹಾಗೂ 1500 ಕ್ಕಿಂತ ಹೆಚ್ಚು ಯೋಗಪಟುಗಳು ಭಾಗವಹಿಸಿ, ಯೋಗಾಭ್ಯಾಸ ಮಾಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಸವಜ್ಯೋತಿ ಯುಥ್ ಫೌಂಡೇಶನ್ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಮಾತನಾಡಿ ಯೋಗವು ಜೀವನವನ್ನು ಶ್ರೀಮಂತ ಗೊಳಿಸುವ ಕಲೆಯಾಗಿದೆ. ಯೋಗದಿಂದ ದೈಹಿಕ, ಮಾನಸಿಕ ಸದೃಢತೆಯನ್ನು ಸಾಧಿಸಿ ಸುಂದರ ಹಾಗೂ ಸರಳ ಬದುಕನ್ನು ಕಟ್ಟಿಕೊಳ್ಳಬಹುದಾಗಿದೆ. ಎಲ್ಲರೂ ತಮ್ಮ ದೈನಂದಿನ ಬದುಕಿನಲ್ಲಿ ಯೋಗ ಅಭ್ಯಾಸವನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಯೋಗವು ವಿಶ್ವಕ್ಕೆ ಭಾರತವು ಕೊಟ್ಟ ಅತ್ಯದ್ಭುತವಾದ ಕಲೆಯಾಗಿದೆ. ಇದು ಜೀವನವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಮಾರ್ಗವಾಗಿದೆ. ನಮ್ಮ ಜೀವನವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಯೋಗವು ಅತ್ಯಂತ ಸಕಾರಿಯಾಗಿದೆ ಎಂದರು.
ಯೋಗ ಪ್ರತಿಜ್ಞಾವಿಧಿಯನ್ನು ಸಂಜಯ ಠೋoಬರೆ ಅವರು ಬೋಧಿಸಿದರು. ಡಾ.ವಿಶಾಲ ನಿಂಬಾಳ್ಕರ್ ಹಾಗೂ ತುಕಾರಾಮ ಕೋಳಿ ಯೋಗ ಪ್ರಾತ್ಯಕ್ಷಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಜ್ಯೋತಿಪ್ರಸಾದ ಜೊಲ್ಲೆ, ಆಡಳಿತ ಮಂಡಳಿಯ ಸದಸ್ಯರು, ಡಾ. ಶಿರಿಷ್ ಕೆರೂರೆ, ಲಕ್ಷ್ಮಣ ಮಾಳಿ, ಗೀತಾ ನಾಯ್ಡು, ರಾಕೇಶ ಮಗದುಮ, ವಿರುಪಾಕ್ಷಿ ಭಿವಸೆ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ