Kannada NewsLatestNationalPolitics

*ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದ ಸಿಎಂ ಮಮತಾ ಬ್ಯಾನರ್ಜಿ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ತೀವ್ರ ಮುಖಭಂಗ ಅನುಭವಿಸಿದ್ದು, ಬಿಜೆಪಿ ಹೊಡೆತಕ್ಕೆ ಹೀನಾಯ ಸೋಲು ಕಂಡಿದೆ. ಬರೋಬ್ಬರಿ 206 ಕ್ಷೇತ್ರಗಳ್ಲಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದರೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕೇವಲ 80 ಸ್ಥಾನಗಳನ್ನು ಪಡೆದಿದೆ. ಈ ಸೋಲನ್ನು ಒಪ್ಪಿಕೊಳ್ಳದ ಮಮತಾ ಬ್ಯಾನರ್ಜಿ ತಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಡುವುದಿಲ್ಲ ಎಂದು ಘೋಷಿಸಿದ್ದಾರೆ.

Home add -Advt

ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಾವು ಸೋತಿಲ್ಲ. ಟಿಎಂಸಿಯ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಯತ್ನ ನಡೆಸಲಾಗಿದೆ. ಇದನ್ನು ನಾನು ಒಪ್ಪಿಕೊಳ್ಳಲ್ಲ. ಬಿಜೆಪಿ ನ್ಯಾಯಯುತವಾಗಿ ಗೆದ್ದಿದ್ದರೆ ಒಪ್ಪುತ್ತಿದ್ದೆ. ಆದರೆ ವಾಮಮಾರ್ಗದ ಮೂಲಕವಾಗಿ ಗೆಲುವು ಪಡೆದುಕೊಂಡಿದೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಮಗೆ ಅನ್ಯಾಯವಾಗಿದೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ, ರಾಜಭವನಕ್ಕೂ ಹೋಗುವುದಿಲ್ಲ. ಬಿಜೆಪಿ ನಮ್ಮಿಂದ 100ಕ್ಕೂ ಹೆಚ್ಚು ಸ್ಥಾನಗಳನ್ನು ಕಿತ್ತುಕೊಂಡಿದೆ. ಲೂಟಿ ಮಾಡಿದೆ. ನಾವು ಚುನಾವಣೆಯಲ್ಲಿ ಸೋಲಲು ಸಾಧ್ಯವೇ ಇಲ್ಲ. ನ್ಯಾಯಯುತವಾಗಿ ಚುನಾವಣೆ ನಡೆದಿಲ್ಲ. ಚುನಾವಣಾ ಆಯೋಗ ಮಾರಾಟವಾಗಿದೆ ಎಂದು ಕಿಡಿಕಾರಿದ್ದಾರೆ.

Related Articles

Back to top button