Belagavi NewsBelgaum NewsKannada NewsKarnataka News

*ಗ್ರಾಮಕ್ಕೆ ನುಗ್ಗಿ ಕಳ್ಳತನ: ದಂಗಾದ ಜನರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳ್ಳತನಕ್ಕೆ ಬಂದ ಮೂವರು ಅಂತರರಾಜ್ಯ ಕಳ್ಳರನ್ನು ಗ್ರಾಮಸ್ಥರು ಹಾಗೂ ಪೊಲೀಸರು ಬಂಧಿಸಿದ ಘಟನೆ ಅಥಣಿ ತಾಲೂಕಿನ ಬಡಚಿ ಗ್ರಾಮದಲ್ಲಿ ನಡೆದಿದೆ.

ಐದು ಜನ ಕಳ್ಳರ ಗ್ಯಾಂಗ್ ಕಳ್ಳತನಕ್ಕೆ ತಡರಾತ್ರಿ ಬಂದಿತ್ತು. ತಕ್ಷಣವೇ ಪೊಲೀಸರು ಹಾಗೂ ಗ್ರಾಮಸ್ಥರು ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಮನೆಗಳ್ಳರನ್ನ ಹಿಡಿದಿದ್ದಾರೆ. ಇನ್ನುಳಿದಂತೆ ಇಬ್ಬರು ಪರಾರಿಯಾಗಿದ್ದಾರೆ.

ದರೋಡೆಕೋರ ಬಳಿ ಕಂಟ್ರಿ ಪಿಸ್ತೂಲು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಮಹಾರಾಷ್ಟ್ರ ಮೂಲದ ದರೋಡೆಕೋರರೆಂದು ಪೋಲೀಸ್‌ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶನಿವಾರ ತಡರಾತ್ರಿ ಮಹಾರಾಷ್ಟ್ರ ಮೂಲದ ದರೋಡೆಕೋರರು ಬೆಡಚಿ ಗ್ರಾಮಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದರು. ಈ ಸಂದರ್ಭದಲ್ಲಿ ಜನರನ್ನು ನೋಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗ್ರಾಮಸ್ಥರು ಮೂವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button