Latest

ಭೀಕರ ರಸ್ತೆ ಅಪಘಾತ; ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಗದಗ: ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

ಮೃತರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅಣ್ಣ-ತಂಗಿ ಹಾಗೂ ತಂಗಿಯ ಮಗು ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲೇ ಗೂಡ್ಸ್ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಮುಂಡರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಂಜಾಬ್ ಸಿಎಂ ಕ್ಯಾ.ಅಮರಿಂದರ್ ಸಿಂಗ್ ರಾಜೀನಾಮೆ

Home add -Advt

Related Articles

Back to top button