Belagavi NewsBelgaum NewsKannada NewsKarnataka News

*ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2024-25ನೇ ಸಾಲಿಗೆ B.Sc Nursing and GNM Nursing Course ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮೀರಿರಬಾರದು. ಅಭ್ಯರ್ಥಿಯ ಅನುದಾನದ ಲಭ್ಯತೆಯ ಅನುಸಾರ ಮೇರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗಿದ್ದು, ಅಭ್ಯರ್ಥಿಗಳು ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ ಸೀಡಿಂಗ್ ಹಾಗೂ NPCI Mapping ಆಗಿರಬೇಕು.

ಆಸಕ್ತಿಯುಳ್ಳ ವಿದ್ಯಾರ್ಥಿಗಳು ಅಕ್ಟೋಬರ್ 10 ರೊಳಗಾಗಿ ವೆಬ್‌ಸೈಟ್ https://sevasindhu.karnataka.gov.in/Sevasindhu/DepartmentServices ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button