ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನಲ್ಲಿ ಬಿ.ಎಸ್‍ಸಿ ನರ್ಸಿಂಗ್ ಮತ್ತು ಜೆಎನ್‍ಎಮ್ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಭೌದ್ಧ, ಸಿಖ್ ಮತು ಪಾರ್ಸಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೋರ್ಸ್‍ನ ಅವಧಿ- ಪೂರ್ಣಾವಧಿಯಾಗಿದ್ದು, ಕುಟುಂಬದ ಒಟ್ಟು ಆದಾಯ 2.50 ಲಕ್ಷ ಮೀರಿರಬಾರದು, ಅನುದಾನದ ಲಭ್ಯತೆಯನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು, ವಿದ್ಯಾರ್ಥಿಗಳು ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಬ್ಯಾಂಕ್ ಖಾತೆಯೊಂದಿಗೆ ಆಧಾರ ಸೀಡಿಂಗ್ ಹಾಗೂ ಎನ್‍ಪಿಸಿಆಯ್ ಮ್ಯಾಪಿಂಗಾ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳತಕ್ಕದ್ದು.ಆಸಕ್ತ ವಿದ್ಯಾರ್ಥಿಗಳು ನವೆಂಬರ್ 10 ರೊಳಗಾಗಿ https://sevasindhu.karnataka.gov.in Sevasindhu/DepartmentServices ವೆಬ್‍ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ