*ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅಂತಿಮ ದಿನಾಂಕ ತಿದ್ದುಪಡಿ ಮಾಡಿ ಮರುಪ್ರಕಟಣೆ ನೀಡಿದ ಇಲಾಖೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಈಗಾಗಲೇ 26-05-2025 ರಂದು ಬಿಡುಗಡೆಯಾದ ಸುದ್ದಿಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30 ಎಂದು ತಪ್ಪಾಗಿದ್ದು, ಸದರಿ ಪ್ರಕಟಣೆಯಲ್ಲಿ ಮೇ 30 ಕೊನೆಯ ದಿನಾಂಕ ಎಂದು ತಿಳಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮರುಪ್ರಕಟಣೆ ನೀಡಿದೆ.
ಬೆಳಗಾವಿ ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿಚನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ, ಅಟಲ ಬಿಹಾರಿ ವಾಜಪೇಯಿ, ಸಂಗೊಳ್ಳಿ ರಾಯಣ್ಣ ವಸತಿ ಶಾಲೆ/ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ/ಉಪನ್ಯಾಸಕರ ಹುದ್ದೆಗಳಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಸ್ವ-ವಿವರವನ್ನು (ಬಯೋಡಾಟ್) ಮೇ. 30, 2025 ರ ವರೆಗೆ ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ, ನೆಹರು ನಗರ ಬೆಳಗಾವಿ (ರಾಮದೇವ ಹೋಟೇಲ ಹತ್ತಿರ ) ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಬೆಳಗಾವಿ ಜಿಲ್ಲೆಯ ವಸತಿ ಶಾಲೆಗಳಲ್ಲಿ ಕನ್ನಡ, ಆಂಗ್ಲ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಕಂಪ್ಯೂಟರ, ದೈಹಿಕ ಶಿಕ್ಷಣ ಹೀಗೆ ಒಟ್ಟು 107 ವಿಷಯವಾರು ಅತಿಥಿ ಶಿಕ್ಷಕರ ಹುದ್ದೆಗೆ ಹಾಗೂ ಕಾಲೇಜುಗಳಲ್ಲಿ ಕನ್ನಡ ಭಾಷೆ, ಆಂಗ್ಲ ಭಾಷೆ, ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ, ಜೀವ ಶಾಸ್ತ್ರ, ಗಣಕ ಶಾಸ್ತ್ರ, ಉಪನ್ಯಾಸಕರ ಒಟ್ಟು 17 ಅತಿಥಿ ಉಪನ್ಯಾಸಕರ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 8095303828, 9731168497 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.