ಪ್ರಗತಿವಾಹಿನಿ ಸುದ್ದಿ, ಭಟ್ಕಳ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಬೆಟ್ಟಿಂಗ್ ಕಟ್ಟಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ಜಾಲಿ ರೋಡ್ ನಲ್ಲಿ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರಿಂದ 50,100 ರೂ. ನಗದು ಹಾಗೂ ಬೆಟ್ಟಿಂಗ್ ಗೆ ಬಳಸಿದ್ದ ಮೊಬೈಲ್ ಅನ್ನು ಜಪ್ತಿಪಡಿಸಿಕೊಳ್ಳಲಾಗಿದೆ. ಕಾರವಾರ ಜಿಲ್ಲಾ ಅಪರಾಧ ಪತ್ತೆ ದಳದ ಇನ್ಸ್ಪೆಕ್ಟರ್ ನಿಶ್ಚಲ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ