
ಪ್ರಗತಿವಾಹಿನಿ ಸುದ್ದಿ: ಇಂಡಿಯನ್ ಪ್ರೀಮಿಯರ್ ಲೀಗ್ ನ18 ನೇ ಆವೃತ್ತಿ ಇಂದಿನಿಂದ ಆರಂಭವಾಗಲಿದೆ. ಇಂದು ನಡೆಯಲಿರೋ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ ಆಗಲಿವೆ.
ಐಪಿಎಲ್‌ನಲ್ಲಿ ಬೆಂಗಳೂರು ಮತ್ತು ಕೋಲ್ಕತ್ತಾ ತಂಡಗಳು 34 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಈ 34 ಪಂದ್ಯಗಳಲ್ಲಿ ಬೆಂಗಳೂರು 14 ಪಂದ್ಯಗಳಲ್ಲಿ ಗೆದ್ದಿದ್ದರೆ, ಕೋಲ್ಕತ್ತಾ 20 ಬಾರಿ ಜಯಗಳಿಸಿದೆ.
ಕೋಲ್ಕತ್ತಾದಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಸಿಲಾಗಿದೆ. ಒಂದು ವೇಳೆ ಮಳೆ ಸುರಿದರೆ ಪಂದ್ಯ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.