Latest

*IPS ಅಧಿಕಾರಿ ಎಸ್.ರವಿ ದಿಢೀರ್ ರಾಜೀನಾಮೆ*

ನಿವೃತ್ತಿಗೆ ಇನ್ನೂ ಆರು ತಿಂಗಳು ಬಾಕಿ ಇರುವಾಗಲೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್​ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ದಿಢೀರ್ ರಾಜೀನಾಮೆ ನೀಡಿದ್ದಾರೆ.

ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ (ವಿಆರ್​ಎಸ್) ಅರ್ಜಿ ಸಲ್ಲಿಸಿದ್ದಾರೆ. ಡಿಜಿ ಐಜಿಪಿ ಸಲೀಂ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದು, ಎಸ್. ರವಿ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನಿನ್ನೆ ಸಂಜೆ ಅಷ್ಟೇ ವಿಆರ್‌ಎಸ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ಡಿಜಿ ಕಚೇರಿಯಿಂದ ಗೃಹ ಇಲಾಖೆಗೆ ಪತ್ರ ರವಾನೆಯಾಗುವ ಸಾಧ್ಯತೆಯಿದೆ. ಆದರೆ, ಪೊಲೀಸ್ ವಲಯದಲ್ಲಿ ಈ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಕೆಲ ಮೂಲಗಳ ಪ್ರಕಾರ, ಹಿರಿಯ ಅಧಿಕಾರಿಗಳೊಂದಿಗೆ ಮನಸ್ತಾಪ ರಾಜೀನಾಮೆಗೆ ಪ್ರಮುಖ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button