Kannada NewsKarnataka NewsLatest

*ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಬಿಗ್ ರಿಲೀಫ್; ಇಲಾಖಾ ತನಿಖಾ ಆದೇಶ ರದ್ದು*

ಪ್ರಗತಿವಾಹಿನಿ ಸುದ್ದಿ: ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರದ ಆದೇಶ ರದ್ದುಗೊಳಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಪ್ರಶ್ನಿಸಿ ಅಲೋಕ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಸಿಎಟಿಯ ಇಬ್ಬರು ನ್ಯಾಯಾಧೀಶರು ವಿಭಿನ್ನ ತೀರ್ಪು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣಜಿತ್ ಅವರಿಗೆ ಕೇಸ್ ವರ್ಗಾವಣೆಯಾಗಿತ್ತು. ಎರಡೂ ಕಡೆ ವಾದ-ಪ್ರತಿವಾದ ಆಲಿಸಿದ ನ್ಯಾ.ರಣಜಿತ್, ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿದ್ದಾರೆ.

ಅಲ್ಲದೇ ಅಲೋಕ್ ಕುಮಾರ್ ಅವರಿಗೆ ಸಲ್ಲಬೇಕಾದ ಬಡ್ತಿ ಸೌಲಭ್ಯವನ್ನು ನೀಡುವಂತೆ ಆದೇಶ ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button