ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆ ಎಡಿಜಿಪಿಯಾಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅವಕಾಶ ಕೋರಿದ್ದಾರೆ. ಈ ಮೂಲಕ ಪೊಲೀಸ್ ಅಧಿಕಾರಿ ಹುದ್ದೆಯಿಂದ ನಿವೃತ್ತಿ ಪಡೆದು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಎಂಬ ಚರ್ಚೆ ಆರಂಭವಾಗಿದೆ.
ಭಾಸ್ಕರ್ ರಾವ್ ಅವರ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇದೆ. ಆದರೆ ಈಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ಸ್ವಯಂ ನಿವೃತ್ತಿಗಾಗಿ ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು ಡಿಜಿ ಹಾಗೂ ಐಜಿಪಿ ಅವರಿಗೆ ಪತ್ರ ಬರೆದಿದ್ದಾರೆ.
ಸ್ವಯಂ ನಿವೃತ್ತಿ ಪಡೆದು ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ಬಸವನಗುಡಿ ಕ್ಷೇತ್ರದಿಂದ ಚುನಾವಣೆಗೂ ಸ್ಪರ್ಧೆ ಮಾಡುವ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಇತಿಹಾಸದಲ್ಲೇ ದೊಡ್ಡ ಕಾರ್ಯಾಚರಣೆ
ಬೆಳಗಾವಿಗೆ ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ