Latest

ಆಮ್ ಆದ್ಮಿ ಪಕ್ಷ ಸೇರ್ಪಡೆಗೆ ಭಾಸ್ಕರ್ ರಾವ್ ನಿರ್ಧಾರ: ಕೇಜ್ರಿವಾಲ್ ಸಮ್ಮುಖದಲ್ಲಿ ನಾಳೆಯೇ ಆಪ್ ಗೆ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಭಾಸ್ಕರ್ ರಾವ್ ರಾಜಕೀಯ ಪ್ರವೇಶವನ್ನು ಖಚಿತಪಡಿಸಿದ್ದು, ಆಮ್ ಆದ್ಮಿ ಪಕ್ಷ ಸೇರ್ಪಡೆಗೆ ನಿರ್ಧರಿಸಿದ್ದಾರೆ.

ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಕೆಲವು ಹಿಂದೆ ರಾಜೀನಾಮೆ ನೀಡಿದ್ದರು. ಸರಕಾರಿ ನಿನ್ನೆಯಷ್ಟೆ ಅವರನ್ನು ಬಿಡುಗಡೆಗೊಳಿಸಿತ್ತು. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿಪಕ್ಷ ಸೇರ್ಪಡೆಯಾಗಲಿದ್ದಾರೆ.

Home add -Advt

ನಾಳೆ ಬೆಳಿಗ್ಗೆ 11 ಗಂಟೆಗೆ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗುತ್ತಿದ್ದು, ಬಳಿಕ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಮೂಲಕ ಮತ್ತೋರ್ವ ಖಡಕ್ ಐಪಿಎಸ್ ಅಧಿಕಾರಿ ರಾಜಕೀಯಕ್ಕೆ ಎಂಟ್ರಿಕೊಡುವುದು ಖಚಿತವಾಗಿದೆ.

ಬೆಲೆ ಏರಿಕೆ ಬಿಸಿ; ಬಿಜೆಪಿ ವಿರುದ್ಧ HDK ಆಕ್ರೋಶ

Related Articles

Back to top button