Kannada NewsLatestNational

*ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಐಪಿಎಸ್ ಅಧಿಕಾರಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಪಣಜಿ; ಮಹಿಳೆಯೊಂದಿಗೆ ಅಸಭ್ಯವರ್ತನೆ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಯನ್ನು ಕೇಂದ್ರ ಗೃಹ ಇಲಾಖೆ ಅಮಾನತುಗೊಳಿಸಿದೆ.

ಗೋವಾದ ಬೀಚ್ ನೈಟ್ ಕ್ಲಬ್ ನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದಕ್ಕಾಗಿ ಹಿರಿಯ ಐಪಿಎಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. 2009ರ ತಂಡದ ಐಪಿಎಸ್ ಅಧಿಕರಿಯಾಗಿದ್ದ ಇವರು ಅರುನಾಚಲಪ್ರದೇಶ, ಗೋವಾ, ಮಿಜೋರಾಂ ಹಾಗೂ ಕೇಂದ್ರಾಡಳಿತ ಪ್ರದೇಶ ಕೇಡರ್ ಅಧಿಕಾರಿಯಾಗಿದ್ದರು.

ಘಟನೆ ಬಳಿಕ ಕೇಂದ್ರ ಗೃಹ ಇಲಖೆ ರಾಜ್ಯ ಸರ್ಕಾರದಿಂದ ವರದಿ ಕೇಳಿತ್ತು. ವರದಿ ಆಧರಿಸಿ ಐಪಿಎಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅಮಾನತು ಆದೇಶ ಜಾರಿಯಲ್ಲಿರುವವರೆಗೂ ಪೂರ್ವಾನುಮತಿ ಇಲ್ಲದೇ ಸ್ಥಳವನ್ನು ಬಿಡುವಂತಿಲ್ಲ ಎಂದು ಸೂಚಿಸಲಾಗಿದೆ.

ಇನ್ನು ಆರೋಪ ಹೊತ್ತ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

Home add -Advt

Related Articles

Back to top button