*ಪೊಲೀಸ್ ಅಧಿಕಾರಿ ವಿರುದ್ಧ ಬೆದರಿಕೆ, ಹಲ್ಲೆ ಆರೋಪ; ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ವಿರುದ್ಧ ಪ್ರಕರಣ ದಾಖಲು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಸಾರ್ವಜನಿಕ ಬಾವಿಯ ಕುಡಿಯುವ ನೀರು ದುರ್ಬಳಕೆ ಮಾಡಿರುವ ಆರೋಪದಲ್ಲಿ ಪೊಲೀಸ್ ಅಧಿಕಾರಿಯೇ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬವೊಂದು ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಹಲ್ಲೆ, ಬೇದರಿಕೆ ಆರೋಪದ ಮೇಲೆ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ಮೇಲೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಗಳಿ ಗ್ರಾಮದ ಸೈದಪ್ಪಾ ಗಡಾದಿ ಕುಟುಂಬದವರು ಸಾರ್ವಜನಿಕರ ಬಾವಿಯ ಕುಡಿಯುವ ನೀರನ್ನು ಬಳಕೆ ಮಾಡುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ತಮ್ಮ ಸಂಬಂಧಿಕರ ಜೊತೆ ಸೇರಿ ಗಲಾಟೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆಸಿ ವಾಗ್ವಾದ ನಡೆದಿದೆ. ಈ ವೇಳೆ ರವೀಂದ್ರ ಗಡಾದಿ ಸೈದಪ್ಪಾ ಕುಟುಂಬದವರ ಮೇಲೆ ಹಲ್ಲೆ ಮಾಡಿ, ಜೀವ ಬೀದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನೊಂದ ಕುಟುಂಬದವರು ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಕುರಿತು ತನಿಖೆ ಆರಂಭವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ