
ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟ ಆಮೀರ್ ಖಾನ್ ಅವರ ಮಗಳು ಇರಾ ಖಾನ್ ಗೆ 25ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಜನ್ಮದಿನದ ಸಂತಸದಲ್ಲಿರುವ ಇರಾ ಖಾನ್ ಬಿಕಿನಿಯಲ್ಲಿಯೇ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಮಗಳ ಹುಟ್ಟುಹಬ್ಬದ ಸಂಭ್ರಮದಲ್ಲಿ ಆಮೀರ್ ಖಾನ್ ಹಾಗೂ ಅವರ ಮೊದಲ ಪತ್ನಿ ರೀನಾ ದತ್ತಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇರಾ ಖಾನ್ ಬಿಕಿನಿ ಧರಿಸಿ ಕೇಕ್ ಮೇಲಿರುವ ಕ್ಯಾಂಡಲ್ ಊದುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇರಾ ಜತೆ ಆಮೀರ್ ಖಾನ್ ಮೊದಲ ಪತ್ನಿ ರೀನಾ, ಆಮೀರ್ ಖಾನ್ ಹಾಗೂ ಎರಡನೇ ಪತ್ನಿ ಮಗ ಆಜಾದ್ ಕೂಡ ಇದ್ದಾರೆ. ಇರಾ ಖಾನ್ ಗೆ ಆಕೆ ಬಾಯ್ ಫ್ರೆಂಡ್ ನೂಪುರ್ ಶಿಖರೆ ಹುಟ್ಟುಹಬ್ಬದ ಶುಭಾಷಯ ಕೋರಿದ್ದಾರೆ.
ಭೀಕರ ಅಪಘಾತ; 6 ಮಹಿಳೆಯರು ಸೇರಿ 8 ಜನರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ