
ಪ್ರಗತಿವಾಹಿನಿ ಸುದ್ದಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಜೊತೆಇರಾನ್ ವಿದೇಶಾಂಗ ಸಚಿವರು ಕೂಡಾ ಹೆಲಿಕಾಪ್ಟರ್ ನಲ್ಲಿ ಇದ್ದರು ಎನ್ನಾಲಾಗಿದೆ. ಇರಾನ್ ನ ಪೂರ್ವ ಅಜರ್‌ಬೈಜಾನ್ ಜೋಲ್ಪಾ ಪ್ರಾಂತ್ಯದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡು ಅಪಘಾತವಾಗಿದೆ ಎಂದು ವರದಿಯಾಗಿದೆ.
ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವ ಹೂಸೈನ್ ಅಮಿರಾಬ್ದೊಲ್ಹೈನ್ ಇಬ್ಬರು ಪೂರ್ವ ಅಜರ್‌ಬೈಜಾನ್‌ನಲ್ಲಿ ಕಾರ್ಯಕ್ರಮಕ್ಕಾಗಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇರಾನ್ ಸೇನೆ, ಅಧ್ಯಕ್ಷರ ಭದ್ರತಾ ಪಡೆ ಜೊತೆ ರಕ್ಷಣಾ ತಂಡ ಕಾರ್ಯಾಚರಣೆ ಮುಂದುವರಿಸಿದೆ.
ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಅಧ್ಯಕ್ಷ ಇಬ್ರಾಹಿಂ ಹಾಗೂ ಹೊಸೈನ್ ಕುರಿತು ಮಾಹಿತಿಗಳು ಲಭ್ಯವಾಗಿಲ್ಲ. ಮಂಜು ಕವಿದ ವಾತಾವರಣದ ಕಾರಣ ಪ್ರಯಾಣ ಅಪಾಯದ ಮುನ್ಸೂಚನೆ ನೀಡಿತ್ತು. ಹೀಗಾಗಿ ಪೈಲಟ್ ತುರ್ತು ಲ್ಯಾಂಡಿಂಗ್ ಮಾಡಲು ಮುಂದಾಗಿದ್ದಾರೆ. ಆದರೆ ಲ್ಯಾಂಡಿಂಗ್ ವೇಳೆಯೇ ಹೆಲಿಕಾಪ್ಟರ್ ಅಪಘಾತವಾಗಿದೆ ಎಂದು ಇರಾನ್ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ