Belagavi NewsBelgaum NewsKannada NewsKarnataka NewsNationalPolitics

*ಆವಾಸ್ ಆರ್ಥಿಕ ನೆರವು 2 ಲಕ್ಷಕ್ಕೆ ಹೆಚ್ಚಿಸುವಂತೆ ಕಡಾಡಿ ಒತ್ತಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸ್ತುತ ಆರ್ಥಿಕ ಪರಿಸ್ಥಿತಿ ಮತ್ತು ನಿರ್ಮಾಣ ವೆಚ್ಚದಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀಡಲಾಗುವ ಆರ್ಥಿಕ ನೆರವನ್ನು 2 ಲಕ್ಷ ರೂಪಾಯಿವರೆಗೆ ಹೆಚ್ಚಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ ವೇಳೆಯಲ್ಲಿ ಕೇಂದ್ರ ಸರ್ಕಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ. 

ಮುಂದಿನ ಐದು ವರ್ಷಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 2 ಕೋಟಿ ಹೆಚ್ಚುವರಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಘೋಷಿಸಿದೆ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಹೊಸ ಕುಟುಂಬಗಳ ವಸತಿ ಅಗತ್ಯಗಳನ್ನು ಪೂರೈಸುವಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರ ಕ್ರಮವನ್ನು ಶ್ಲಾಘೀಸಿದರು.

Home add -Advt

ಕಳೆದ 10 ವರ್ಷಗಳಲ್ಲಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅಡಿಯಲ್ಲಿ 2.64 ಕೋಟಿ ಗ್ರಾಮೀಣ ಮನೆಗಳನ್ನು ನಿರ್ಮಿಸಲಾಗಿದೆ, ಆದರೆ 2014 ರ ಮೊದಲು 29 ವರ್ಷಗಳಲ್ಲಿ ಇಂದಿರಾ ಆವಾಸ್ ಯೋಜನೆ ಮೂಲಕ ಕೇವಲ 3.25 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎನ್.ಡಿ.ಎ ಸರ್ಕಾರವು ಗ್ರಾಮೀಣ ವಸತಿ ಯೋಜನೆಯಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ ಎಂಬುದನ್ನು ಇದು ತೋರಿಸುತ್ತದೆ ಎಂದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣದಲ್ಲಿ ಕನಿಷ್ಠ ವಿಸ್ತೀರ್ಣವನ್ನು 20 ಚದರ ಮೀಟರ್ ನಿಂದ 25 ಚದರ ಮೀಟರ್‌ಗೆ ಹೆಚ್ಚಿಸಲಾಗಿದೆ. ಅಲ್ಲದೆ, ಪ್ರತಿ ಯೂನಿಟ್ ಸಹಾಯಧನವನ್ನು ಸಾಮಾನ್ಯ ಪ್ರದೇಶಗಳಲ್ಲಿ ರೂ. 70,000 ರಿಂದ ರೂ 1.20 ಲಕ್ಷಕ್ಕೆ ಮತ್ತು ಗುಡ್ಡಗಾಡು/ಕಠಿಣ ಪ್ರದೇಶಗಳಲ್ಲಿ ರೂ. 75,000 ರಿಂದ ರೂ. 1.30 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮತ್ತು ಗ್ರಾಮೀಣ ಬಡವರಿಗೆ ಹೆಚ್ಚು ಪ್ರಯೋಜನವಾಗುವ ಹಿನ್ನಲೆಯಲ್ಲಿ ಸಹಾಯಧನದ ಮೊತ್ತವನ್ನು ಕನಿಷ್ಠ 2 ಲಕ್ಷ ರೂಪಾಯಿವರೆಗೆ ಹೆಚ್ಚಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸದನದಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

Related Articles

Back to top button