ಪ್ರಗತಿವಾಹಿನಿ ಸುದ್ದಿ: ಭಾರತೀಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಏಜೆನ್ಸಿ (IREDA) ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲೇ ಉತ್ತಮ ಬೆಳವಣಿಗೆ ದಾಖಲಿಸಿದೆ.
ಭಾರತ ಸರ್ಕಾರದ ಉದ್ಯಮವಾಗಿರುವ IREDA 2024-25ರ ಪ್ರಥಮ ತ್ರೈಮಾಸಿಕದಲ್ಲಿ ಶೇ.30ರಷ್ಟು ನಿವ್ವಳ ಲಾಭ ಗಳಿಸಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ IREDA ಒಂದು ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಯಾಗಿದ್ದು, ಇದರ ಒಟ್ಟು ಆದಾಯ ಪ್ರಸ್ತುತದಲ್ಲಿ ಶೇ.32ರಷ್ಟು ಏರಿಕೆ ಕಂಡಿದೆ. 2024ರ ಮೊದಲ ತ್ರೈಮಾಸಿಕದಲ್ಲಿ ರೂ.1510.70 ಕೋಟಿಗೆ ತಲುಪಿದೆ ಎಂದು ಹೇಳಿದ್ದಾರೆ.
ಭಾರತದ ಇಂಗಾಲದ ಹೆಜ್ಜೆ ಗುರುತನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಮ್ಮ ಸ್ಥಿರ ಮತ್ತು ಸಂಘಟಿತ ಪ್ರಯತ್ನಗಳು ಶೀಘ್ರದಲ್ಲೇ ಫಲ ನೀಡಲಿವೆ ಎಂದೂ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ