Kannada NewsKarnataka NewsLatest
ರಮೇಶ್ ಕುಮಾರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ ನೀಡಿದ ಹೇಳಿಕೆ ಖಂಡಿಸಿ ಭಾರತೀಯ ಜನತಾಪಾರ್ಟಿ ಮಹಿಳಾ ಮೋರ್ಚಾ ಸೋಮವಾರ ಪ್ರತಿಭಟನೆ ನಡೆಸಿತು.
ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಚಿನ್ನಾಕಟ್ಟಿ, ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್, ಮಹಾನಗರ ಅಧ್ಯಕ್ಷೆ ಸುವರ್ಣಾ ಪಾಟೀಲ ಮೊದಲಾದವರ ನೇತೃತ್ವದಲ್ಲಿ ನೂರಾರು ಮಹಿಳೆಯರು ಸುವರ್ಣ ವಿಧಾನಸೌಧದ ಬಳಿಯ ಸುವರ್ಣ ಗಾರ್ಡನ್ ನಲ್ಲಿ ಪ್ರತಿಭಟನೆ ನಡೆಸಿದರು. ರಮೇಶ್ ಕುಮಾರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸದನದಲ್ಲಿ ಕ್ಷಮೆ ಕೋರಿದ ರಮೇಶ್ ಕುಮಾರ್ ಹೇಳಿದ್ದೇನು?




