Latest

*ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಹಾಡಹಗಲೇ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗರು ಬೆಚ್ಚಿ ಬೀಳುವಂತಹ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯನ್ನು ಹಾಡಹಗಲೇ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ.

ಕುಮಾರಸ್ವಾಮಿ ಲೇಔಟ್ ನ 4ನೇ ಅಡ್ಡರಸ್ತೆಯಲ್ಲಿ ಫೆ.7ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದು ಹೋಗುತ್ತಿದ್ದ ಯುವತಿಯನ್ನು ಎಳೆದೊಯ್ದ ಕಾಮುಕರು ಆಕೆಯ ಕತ್ತು ಬಿಗಿದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ನಿರ್ಮಾಣ ಹಂತದ ಕಟ್ಟಡಕ್ಕೆ ಯುವತಿಯನ್ನು ಹೊತ್ತೊಯ್ದು ಆಕೆಯ ಕೈ ಕಚ್ಚಿ ವಿಕೃತಿ ಮೆರೆದಿದ್ದಾರೆ. ಅತ್ಯಾಚಾರಕ್ಕೆ ಕಾಮುಕರು ಮುಂದಾಗಿದ್ದಾರೆ. ಅಷ್ಟರಲ್ಲಿ ಬೈಕ್ ಸವಾರನೊಬ್ಬ ಅದೇ ಜಾಗಕ್ಕೆ ಬರುವಷ್ಟರಲ್ಲಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಯುವತಿ ಬಚಾವ್ ಆಗಿದ್ದಾಳೆ.

ಘಟನೆ ಸಂಬಂಧ ಯುವತಿ ಈವರೆಗೆ ಯಾವುದೇ ದೂರು ನೀಡಿಲ್ಲ ಎನ್ನಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಹಗಲಿನಲ್ಲಿಯೂ ಒಬ್ಬರೆ ಓಡಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ.

*ಒಳಚರಂಡಿ ವ್ಯವಸ್ಥೆಯ ಸುಧಾರಣೆಗಾಗಿ ವಿಶೇಷ ಮಾಸ್ಟರ್ ಪ್ಲಾನ್*

Home add -Advt

Related Articles

Back to top button