Latest

ಆಸ್ಪತ್ರೆ ಕೇಳಿದವರನ್ನು ಬ್ಲಾಕ್ ಮಾಡುತ್ತಿದ್ದಾರೆಯೇ ಸಂಸದ?

ಪ್ರಗತಿವಾಹಿನಿ ಸುದ್ದಿ, ಶಿರಸಿ:

ಉತ್ತರ ಕನ್ನಡ ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.

Home add -Advt

ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರು ಆರಂಭಿಸಿರುವ ಈ ಅಭಿಯಾನಕ್ಕೆ ಭಾರೀ ಜನ ಬೆಂಬಲ ವ್ಯಕ್ತವಾಗುತ್ತಿದೆ.

ಸಂಸದ ಅನಂತಕುಮಾರ ಹೆಗಡೆ, ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಟ್ಯಾಗ್ ಮಾಡಿ ಅಭಿಯಾನ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕಳಿಸಲಾಗುತ್ತಿದೆ.

ಆದರೆ, ತಮ್ಮನ್ನು ಟ್ಯಾಗ್ ಮಾಡುತ್ತಿರುವವರನ್ನು ಸಂಸದ ಅನಂತ ಕುಮಾರ ಹೆಗಡೆ ಬ್ಲಾಕ್ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಅಪಾರ ಪ್ರಮಾಣದಲ್ಲಿ ಮೆಸೇಜ್ ಬರುತ್ತಿರುವುದರಿಂದ ಕಿರಿಕಿರಿ ಉಂಟಾಗಿ ಬ್ಲಾಕ್ ಮಾಡುತ್ತಿದ್ದಾರೆ ಎನ್ನಲಾಗಿದೆ.

Related Articles

Back to top button