Kannada NewsKarnataka News

ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿ ನಿಲ್ಲುತ್ತಾ? CM ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು, ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಶಕ್ತಿ ಯೋಜನೆ ಸಧ್ಯದಲ್ಲೇ ಸ್ಥಗಿತಗೊಳ್ಳಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿರುವ ಕುರಿತು ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೂಡ ಇಂತದೇ ಸ್ಪಷ್ಟನೆ ನೀಡಿದೆ. ರಾಜ್ಯದ ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಕಾಂಗ್ರೆಸ್ ಸರಕಾರ ಎಲ್ಲಕ್ಕಿಂತ ಮೊದಲು ಜಾರಿಗೆ ತಂದಿತು. ಈಗಾಗಲೆ 30 ಕೋಟಿಗಿಂತ ಹೆಚ್ಚು ಮಹಿಳೆಯರು ಯೋಜನೆಯ ಪ್ರಯೋಜನ ಪಡೆದಿದ್ದಾರೆ.

ಆರಂಭದಿಂದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತ ಬಂದಿರುವ ಬಿಜೆಪಿ ಈಗ ಯೋಜನೆ ಸಧ್ಯದಲ್ಲೇ ಸ್ಥಗಿತಗೊಳ್ಳಲಿದೆ ಎನ್ನುವ ವದಂತಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ.

Home add -Advt

Related Articles

Back to top button