ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ; ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.
ಜಗ್ಗಿ ವಾಸುದೇವ್ ಅವರು ಜೀವಂತ ಹಾವು ಕೈಲಿ ಹಿಡಿದು ಪ್ರದರ್ಶನ ಮಾಡಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಉರಗ ತಜ್ಞ ಪೃಥ್ವಿರಾಜ್ ದೂರು ನೀಡಿದ್ದಾರೆ.
ಇತ್ತೀಚೆಗೆ ನಡೆದ ನಾಗಮಂಟಪ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ್ ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಉಲ್ಲಂಘನೆಯಾಗಿದೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇಲೆ ಗರಂ ಆದ ಸಿಎಂ ಬೊಮ್ಮಾಯಿ
https://pragati.taskdun.com/politics/cm-basavaraj-bommaib-c-nageshbangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ