Kannada NewsKarnataka News

ನಾಳೆಯಿಂದ 3 ದಿನ ಈಶ್ವರಪ್ಪ ಬೆಳಗಾವಿಯಲ್ಲಿ

ನಾಳೆಯಿಂದ 3 ದಿನ ಈಶ್ವರಪ್ಪ ಬೆಳಗಾವಿಯಲ್ಲಿ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – 

Home add -Advt

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಶನಿವಾರ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನನಿಲ್ದಾಣಕ್ಕೆ  9.15ಕ್ಕೆ ಆಗಮಿಸುವ ಅವರು ಅಲ್ಲಿಂದ ರಸ್ತೆ ಮೂಲಕ 10.20ಕ್ಕೆ ಬೆಳಗಾವಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ನಂತರ ಇಲ್ಲಿಂದ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆಗೆ ತೆರಳುವರು.

ಸಂಜೆ 4.30ಕ್ಕೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ಪಂಚಾಯಿತಿ ರಾಜ್ ಇಲಾಖೆಗೆ ಸಂಬಂಧಪಟ್ಟ ಪೂರ್ವಭಾವಿ ಸಭೆ ನಡೆಸುವರು. ರಾತ್ರಿ ಪ್ರವಾಸಿ ಮಂದಿರದಲ್ಲೇ ವಾಸ್ತವ್ಯ ಮಾಡಿ, ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸುವರ್ಣ ವಿಧಾನಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿ ರಾಜ್ಯ ಇಲಾಖೆಯ ಪ್ರಗತಿಪರಿಶೀಲನೆ ನಡೆಸುವರು.

ರಾತ್ರಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಿ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಪುನಃ ಸುವರ್ಣ ವಿಧಾನಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿ ರಾಜ್ಯ ಇಲಾಖೆಯ ಪ್ರಗತಿಪರಿಶೀಲನೆ ನಡೆಸುವರು. ಸೋಮವಾರ ಸಂಜೆ 5.30ಕ್ಕೆ ಹುಬ್ಬಳ್ಳಿಗೆ ತೆರಳುವರು.

ಸಚಿವರೊಬ್ಬರು ನಿರಂತರ 3 ದಿನ ವಾಸ್ತವ್ಯವಿದ್ದು, ಇಲಾಖೆಯ ಪ್ರಗತಿ ಪರಿಶೀಲನೆ ಮಾಡುತ್ತಿರುವುದು ಅಪರೂಪವಾಗಿದೆ.

Related Articles

Back to top button