Latest

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದೆ ಐಸಿಸ್ ಉಗ್ರರ ತಂಡ

ಪ್ರಗತಿವಾಹಿನಿ ಸುದ್ದಿ; ವಿಶ್ವಸಂಸ್ಥೆ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಅಟ್ಟಹಾಸದ ನಡುವೆ ವಿಶ್ವಸಂಸ್ಥೆ ಇನ್ನೊಂದು ಆತಂಕಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಹಲವು ಐಸಿಸ್ ಭಯೋತ್ಪಾದಕರಿದ್ದಾರೆ ಎಂದು ಎಚ್ಚರಿಕೆ ನೀಡಿದೆ.

ವಿಶ್ವಸಂಸ್ಥೆಯ 26ನೇ ಅನಾಲಿಟಿಕಲ್ ಸಪೋರ್ಟ್ ಅಂಡ್ ಸ್ಯಾಂಕ್ಷನ್ಸ್ ಮಾನಿಟರಿಂಗ್ ತಂಡದ ವರದಿಯಲ್ಲಿ ಐಸಿಸ್, ಅಲ್ ಖೈದಾ ಮತ್ತು ಅದರ ಸಹಚರ ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿದೆ. ಭಾರತದ ಅಲ್ಲಲ್ಲಿ ಅಲ್ ಖೈದಾ ಆಫ್ಘಾನಿಸ್ತಾನದ ನಿಮ್ರುಝ್, ಹೆಲ್ಮಾಂಡ್ ಮತ್ತು ಕಂದಹಾರ್ ಪ್ರಾಂತ್ಯಗಳಿಂದ ತಾಲಿಬಾನ್ ಕೈಕೆಳಗೆ ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಮ್ಯಾನ್ಮಾರ್ ದೇಶಗಳಲ್ಲಿ ನೆಲೆಗಳನ್ನು ಕಲ್ಪಿಸಿಕೊಂಡಿರುವ ಸುಮಾರು 150ರಿಂದ 200 ಅಲ್ ಖೈದಾ, ಐಸಿಸ್ ಭಯೋತ್ಪಾದಕರು ದಾಳಿ ಮಾಡಲು ಹೊಂಚು ಹಾಕುತ್ತಿದ್ದಾರೆ. ಕರ್ನಾಟಕ ಮತ್ತಿ ಕೇರಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಐಸಿಸ್ ಉಗ್ರರಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತದಲ್ಲಿನ ಅಲ್ ಖೈದಾ ಗುಂಪಿನ ನಾಯಕ ಒಸಮಾ ಮಹಮ್ಮೂದ್ ಆಗಿದ್ದು ಈತ ಮಾಜಿ ನಾಯಕ ಆಸಿಮ್ ಉಮರ್ ಬಳಿಕ ತಂಡದ ನಾಯಕತ್ವ ವಹಿಸಿಕೊಂಡಿದ್ದಾನೆ. ಮಾಜಿ ನಾಯಕನ ಸಾವಿಗೆ ಪ್ರತೀಕಾರ ತೆಗೆದುಕೊಳ್ಳಲು ಈತ ಹೊಂಚು ಹಾಕುತ್ತಿದ್ದಾನೆ ಎಂದು ಹೇಳಲಾಗುತ್ತಿದೆ.

Home add -Advt

Related Articles

Back to top button