Kannada NewsKarnataka NewsLatest
*ಐಸಿಸ್ ಉಗ್ರ ಸಂಘಟನೆಗೆ ಹಣಕಾಸಿನ ನೆರವು ಆರೋಪ: 8 ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಐಸಿಸ್ ಭಯೋತ್ಪಾದಕ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಬಂಧಿಸಿದಂತೆ ಬೆಂಗಳೂರಿನ 8 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಿರಿಯಾದಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸಿನ ನೆರವು, ಮುಸ್ಲಿಮರ ನೇಮಕಾತಿ ಮತ್ತು ಹಣಕಾಸು ನೆರವು ನೀಡಿದ ಪ್ರಕರಣ ಇದಾಗಿದೆ. ಎನ್ಐಎ ದಾಖಲಿಸಿದ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ (ಇಡಿ) ಸಹ ಪ್ರಕರಣ ದಾಖಲಿಸಿಕೊಂಡಿದೆ.
ಇಕ್ರಾ ವೆಲ್ಫೇರ್ ಟ್ರಸ್ಟ್, GFM ಟ್ರಸ್ಟ್ ಮೂಲಕ ಹಣ ವರ್ಗಾವಣೆಯಾಗಿರುವ ವಿಚಾರ ಎನ್ ಐಎ ತನಿಖೆ ವೇಳೆ ಬಯಲಾಗಿತ್ತು. ಐಸಿಸ್ ಶಿಬಿರಕ್ಕೆ ಸೇರಲು ಹಣ ಬಳಸಲಾಗಿದೆ ಎಂಬುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

