Latest

ಸ್ಯಾಂಡಲ್ ವುಡ್ ಇಬ್ಬರು ನಟಿಯರು ಮತ್ತೆ ಸಿಸಿಬಿ ಕಸ್ಟಡಿಗೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ವಹಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಇಂದು ನಟಿಯರಾದ ರಾಗಣಿ ದ್ವಿವೇದಿ ಹಾಗೂ ಸಂಜನಾ ಅವರ ಸಿಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

Home add -Advt

ಇಬ್ಬರು ನಟಿಯರ ವಿರುದ್ಧ ಸಾಕಷ್ಟು ಸಾಕ್ಷ್ಯಗಳು ದೊರೆತಿವೆ. ಆದಾಗ್ಯೂ ಇಬ್ಬರು ನಟಿಯರು ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ ಅವರನು ಇನ್ನಷ್ಟು ವಿಚಾರಣೆಗೆ ಒಳಪಡಿಸಬೇಕಿದೆ ಹೀಗಾಗಿ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸುವಂತೆ ನ್ಯಾಯಾಧೀಶರ ಎದುರು ತನಿಖಾಧಿಕಾರಿಗಳು ಮನವಿ ಮಾಡಿದ್ದಾರೆ.

5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಲು ಒಪ್ಪದ ನ್ಯಾಯಾಧೀಶರು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ.

Related Articles

Back to top button