ಪ್ರಗತಿವಾಹಿನಿ ಸುದ್ದಿ; ಗಾಜಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಮಾಸ್ ಉಗ್ರರ ವಿರುದ್ಧ ತಿರುಗಿ ಬಿದ್ದಿರುವ ಇಸ್ರೇಲ್ ಗಾಜಾದ ಆಸ್ಪತ್ರೆಯ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ 500ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.
ಇಸ್ರೇಲ್ ಗಾಜಾ ಆಸ್ಪತ್ರೆಯ ಮೇಲೆ ನಡೆಸಿರುವ ಬಾಂಬ್ ದಾಳಿಯಲ್ಲಿ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.
ಆದರೆ ಈ ದಾಳಿ ಬಗ್ಗೆ ಇಸ್ರೇಲ್ ಮಿಲಿಟರಿ ಪ್ಯಾಲಿಸ್ತೇನಿಯನ್ ಇಸ್ಲಾಮಿಕ್ ಜಿಹಾದ್ ಭಯೋತ್ಪಾದಕರ ಗುಂಪನ್ನು ದೂಷಿಸಿದೆ.
ಬಾಂಬ್ ದಾಳಿಯಲ್ಲಿ 500ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಕರ್ತರು ಅವಶೇಷಗಳಡಿಯಿಂದ ಮೃತದೇಹ ತೆರು ಕಾರ್ಯ ನಡೆಸಿದ್ದಾರೆ. ಇಸ್ರೇಲ್ ನ 11 ದಿನಗಳ ನಿರಂತರ ಬಾಂಬ್ ದಾಳಿಯಲ್ಲಿ 3000 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವಕ್ತಾರ ಆಶ್ರಫ್ ಅಲ್ ಕುದ್ರಾ ತಿಳಿಸಿದ್ದಾರೆ.
ಈ ದಾಳಿಯನ್ನು ಖಂಡಿಸಿರುವ ಅಮೆರಿಕ ಅಧ್ಯಕ್ಷ ಜೊಬೈಡನ್, ಗಾಜಾದ ಅಲ್ ಅಹ್ಲಿ ಅರಬ್ ಆಸ್ಪತ್ರೆ ಮೇಲಿನ ಬಾಂಬ್ ದಾಳಿಯಿಂದ ಭೀಕರ ಪ್ರಾನಹಾನಿ ಸಂಭವಿಸಿದೆ. ಇದರಿಂದ ಆಕ್ರೋಶಿತನಾಗಿದ್ದೆನೆ. ಈ ದಾಳಿ ವಿಚಾರವಾಗಿ ಇಸ್ರೇಲ್ ಪ್ರಧಾನಿ ನೇತನ್ಯಾಹು ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ