LatestWorld

*ಇಸ್ರೇಲ್ ಸೇನೆ ದಾಳಿಗೆ ಹಮಾಸ್ ನ ಹಿರಿಯ ಅಧಿಕಾರಿಯ ಸಾವು*

ಪ್ರಗತಿವಾಹಿನಿ ಸುದ್ದಿ: ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಹಮಾಸ್‌ನ ಹಿರಿಯ ಅಧಿಕಾರಿ ಇಝ್‌-ಅಲ್‌ ದೀನ್‌ ಕಸಬ್‌ರನ್ನು ಕೊಂದು ಹಾಕಿರುವುದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ.

ಗಾಜಾ ಪಟ್ಟಿಯಲ್ಲಿರುವ ಇತರ ಸಂಘಟನೆಗಳೊಂದಿಗೆ ಸಮನ್ವಯ ವಹಿಸುವಲ್ಲಿ ಕಸಬ್ ಪ್ರಮುಖ ಪಾತ್ರ ವಹಿಸುತ್ತಿದ್ದರು. ಅಲ್ಲದೆ ಹಮಾಸ್‌ನ ಉನ್ನತ ಶ್ರೇಣಿಯ ನಾಯಕರಾಗಿದ್ದರು ಎಂದು ಇಸ್ರೇಲ್‌ ಹೇಳಿದೆ. ಕಸಬ್ ಸಾವನ್ನಪ್ಪಿರುವದನ್ನು ಹಮಾಸ್ ಬಂಡುಕೋರ ಸಂಘಟನೆಯೂ ಕೂಡಾ ಖಚಿತ ಪಡಿಸಿ ಅವರ ಸಾವಿಗೆ ದುಃಖ ವ್ಯಕ್ತ ಪಡಿಸುತ್ತೇವೆ ಎಂದು ಹೇಳಿದೆ. ಅಲ್ಲದೆ ಮತ್ತೊಬ್ಬ ಅಧಿಕಾರಿ ಐಮನ್ ಆಯೆಷ್ ಕೂಡ ಇಸ್ರೇಲ್ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಪ್ರಕಟಣೆಯಲ್ಲಿ ತಿಳಿಸಿದೆ. 

ಕಸಬ್‌, ಗಾಜಾದಲ್ಲಿ ಸ್ಥಳೀಯ ಗುಂಪಿನ ಅಧಿಕಾರಿಯಾಗಿದ್ದರೂ, ಅದರ ನಿರ್ಧಾರ ತೆಗೆದುಕೊಳ್ಳುವ ರಾಜಕೀಯ ಕಚೇರಿಯ ಸದಸ್ಯರಲ್ಲ ಎಂದು ಹಮಾಸ್ ಮೂಲಗಳು ತಿಳಿಸಿವೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button