Kannada NewsKarnataka NewsLatest

*ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬುಧವಾರ ನಡೆದ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಹಾಗೂ ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು 2023ನೇ ಸಾಲಿನ ಶ್ರೀ ವೀರಭದ್ರೇಶ್ವರ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

Home add -Advt

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನಿಧ್ಯ‌‌ ವಹಿಸಿದ್ದರು. ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಮಠದ ಡಾ.ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಗಳು, ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಮಹಾಸ್ವಾಮಿಗಳು, ಗೌರಿಗದ್ದೆ ಆಶ್ರಮದ ವಿನಯ್ ಗರೂಜಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.


Related Articles

Back to top button