Kannada NewsKarnataka News

ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ

ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

Home add -Advt

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಟ್ಟಡ ಕಾರ್ಮಿಕರಿಗೆ ಜನ ಕಲ್ಯಾಣ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ, ಬೆಳಗಾವಿ ಗೋಮಟೇಶ ವಿದ್ಯಾಪೀಠದ  ವತಿಯಿಂದ ನೂತನ ಕಾರ್ಮಿಕರ ಗುರುತಿನ ಚೀಟಿಗಳನ್ನು ಸಂಘದ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ ವಿತರಿಸಿದರು.

ಈ ಸಂದರ್ಭದಲ್ಲಿ  ಸಂಜಯ ಪಾಟೀಲ  ಮಾತನಾಡುತ್ತ, ಕಟ್ಟಡ ಕಾರ್ಮಿಕರು ಕಡು ಬಡವರಾಗಿದ್ದು ಅವರ ಅನುಕೂಲಕ್ಕಾಗಿ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಈ ಯೋಜನೆ ಅತ್ಯಂತ ಅನುಕೂಲಕರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಇಂತಹ ಅನೇಕ ಯೋಜನೆಗಳನ್ನು ಜಾರಿ ಗೊಳಿಸಿದ್ದು ಅವುಗಳ ಬಗ್ಗೆ ಮಾಹಿತಿ ಪಡೆದು  ಎಲ್ಲರೂ ಅವುಗಳ ಸದುಪಯೋಗ ಪಡೆದು ಕೊಳ್ಳಬೇಕೆಂದು ಕರೆನೀಡಿದರು.

ಸಂಘದ ಉಪಾಧ್ಯಕ್ಷ ಅಭಯ ಅವಲಕ್ಕಿ, ಪ್ರಧಾನ ಕಾರ್ಯದರ್ಶಿ ಮಹೇಶ ಮೋಹಿತೆ, ಕಾರ್ಯದರ್ಶಿ ಸಾಗರ ಶೇರೆಕರ, ಬಾಪುಸೊ ಪಾಟೀಲ ಹಾಗೂ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.

Related Articles

Back to top button