
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ. ಪ್ರಥಮ ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಕಳೆದ ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ಗೈರಾದ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 20ರೊಳಗೆ ಪರೀಕ್ಷೆ ನಡೆಸಿ, ಪಾಸ್ ಆಗಲು ಬೇಕಾದ ಅಂಕಗಳನ್ನು ನೀಡಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಅವರಿಗೆ ಅವಕಾಶ ನೀಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಈ ಬಗ್ಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಎಲ್ಲಾ ಕಾಲೇಜು ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಿದ್ದಾರೆ.




