ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ಶಾಕ್ ನೀಡಿದ್ದು, ಆ ಲೈನ್ ನಲ್ಲಿ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ.
ಈ ಬಾರಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆಯೇ ಪಾಸ್ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಹಿಂದೆ ತಿಳಿಸಿದ್ದರು. ಆದರೆ ಈಗ ಪಿಯು ಬೋರ್ಡ್ ಆನ್ ಲೈನ್ ಪರೀಕ್ಷೆ ಘೋಷಿಸಿದ್ದು, ಎರದು ವಿಷಯಗಳಿಗೆ ಪರೀಕ್ಷೆ ನಡೆಸುವುದಾಗಿ ತಿಳಿಸಿ, ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ.
ಈಗಾಗಲೇ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿರುವ ಪಿಯು ಬೋರ್ಡ್, ಕಾಲೇಜುಗಳಿಗೆ ಆನ್ ಲೈನ್ ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಪಿಯು ಬೋರ್ಡ್ ವೆಬ್ ಸೈಟ್ ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದ್ದು, ವಿದ್ಯಾರ್ಥಿಗಳು ಅದನ್ನು ಡೌನ್ ಲೋಡ್ ಮಾಡಿಕೊಂಡು ಉತ್ತರ ಬರೆದು ಕಳುಹಿಸಬೇಕು ಎಂದು ತಿಳಿಸಿದೆ.
ಮನೆಯಿಂದ ಹೊರಬರುವವರಿಗೆ ಗೃಹ ಸಚಿವರ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ