*ಪ್ರಜ್ವಲ್ ರೇವಣ್ಣನಂತಹ ಕಾಮುಕನಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದು ದುರಂತ: ಬೆಳಗಾವಿಯಲ್ಲಿ ಸುಪ್ರಿಯಾ ಶ್ರಿನೇತ್*
ಪ್ರಗತಿವಾಹಿನಿ ಸುದ್ದಿ: ಹಾಸನದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಮಾಡಿರುವ ಪ್ರಕರಣ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿದಿದ್ದರೂ ಹಾಸನ ಟಿಕೆಟ್ ನೀಡಿದ್ದು ದುರ್ದೈವದ ಸಂಗತಿ ಎಂದು ಎಐಸಿಸಿ ರಾಷ್ಟ್ರೀಯ ಕಾಂಗ್ರೆಸ್ ವಕ್ತಾರೆ ಸುಪ್ರೀಯಾ ಶ್ರಿನೇತ್ ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಗ್ಗೆ ಪ್ರಧಾನಿಯವರಿಗೆ 6 ತಿಂಗಳ ಹಿಂದೆ ಗೊತ್ತಿತ್ತು. ಪ್ರಧಾನಿ ಮೋದಿಯವರು ಗೊತ್ತಿದ್ದರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡದ್ದರು. ಏ.14 ರಂದು ಮೈಸೂರಿನಲ್ಲಿ ಜೆಡಿಎಸ್ ನಾಯಕರನೊಂದಿಗೆ ಪ್ರಚಾರ ಮಾಡಿದ್ದರು. ಪ್ರಧಾನಿ ಮೋದಿಯವರಿಗೆ ಹೆಣ್ಣು ಮಕ್ಕಳ ಬಗ್ಗೆ ಕಾಳಜಿ ಇಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಮಹಿಳೆಯರಿಗೆ ಎಲ್ಲೇ ಅನ್ಯಾಯವಾದರೂ ನಾವು ಖಂಡಿಸುತ್ತೇವೆ. ಅವರ ಪರವಾಗಿ ನಿಲ್ಲುತ್ತೇವೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಅದರಲ್ಲಿ ರಾಜಕೀಯ ಬೆರೆಸಲು ನಾವು ಹೋಗುವುದಿಲ್ಲ. ಇಲ್ಲೂ ನೂರಾರು ಮಹಿಳೆಯರಿಗೆ ಅನ್ಯಾಯವಾಗಿದೆಯಲ್ಲವೇ. ವಿದೇಶದಿಂದ, ಹೊರ ರಾಜ್ಯಗಳಿಂದ ಫೋನ್ ಕಾಲ್ ಗಳು ಬರುತ್ತಿವೆ. ಇಂತಹ ಪ್ರಕರಣ ನಡೆದಿದ್ದು ನಿಜವೇ ಎಂದು ಪ್ರಶ್ನಿಸುತ್ತಿದ್ದಾರೆ. ಸರಕಾರ ಏನು ಕ್ರಮ ಕೈಗೊಳ್ಳಲಿದೆ ಎಂದು ಪ್ರಶ್ನಿಸುತ್ತಿದ್ದಾರೆ. ಪ್ರಕರಣವನ್ನು ರಾಜ್ಯ ಸರ್ಕಾರ ಈಗಾಲೇ ಎಸ್ ಐಟಿ ತನಿಖೆಗೆ ವಹಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ