ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರ ಬಗ್ಗೆ ಹಗುರವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕ್ಷಮೆ ಕೇಳುವ ಮೂಲಕ ತಮ್ಮ ತಪ್ಪನ್ನು ತಿದ್ದುಕೊಳ್ಳಬೇಕು ಎಂದು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ ಜೊಲ್ಲೆ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, “ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ನಾಯಿ ಮರಿ ಥರ ಇರುತ್ತಾರೆ” ಎನ್ನುವ ಸಿದ್ದರಾಮಯ್ಯ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಾಗಿ, ಹಣಕಾಸು ಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ, ಈಗ ವಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಹಲವಾರು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿರುವ ಅವರು, ರಾಜ್ಯದ ಪ್ರಮುಖ ಸಾಂವಿಧಾನಿಕ ಹುದ್ದೆಯಲ್ಲಿರುವ ಹಾಗೂ ತಮಗಿಂತಲೂ ಹೆಚ್ಚು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಮೂಲಕ ಅಭಿವೃದ್ಧಿಪರ ಆಡಳಿತ ನೀಡುತ್ತಿರುವ ಬಸವರಾಜ ಬೊಮ್ಮಾಯಿ ಅವರ ವಿರುದ್ದ ಹಗುರ ಹೇಳಿಕೆ ನೀಡಿರುವುದು ನಿಮಗೆ ಶೋಭೆ ತರುವಂತಹದ್ದಲ್ಲ ಎಂದಿದ್ದಾರೆ.
ಕಾಮನ್ ಮ್ಯಾನ್ ಸಿಎಂ ಎಂದೇ ಹೆಸರು ಪಡೆದುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಬಗ್ಗೆ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿ ಸಫಲರಾಗಿದ್ದಾರೆ. ಹಲವಾರು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯಶಸ್ವಿಯಾಗಿರುವುದು ಸಿದ್ದರಾಮಯ್ಯ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ ಎನ್ನುವುದು ಇಂತಹ ಹಗುರ ಮಾತುಗಳಿಂದ ಸ್ಪಷ್ಟವಾಗುತ್ತಿದೆ. ನಾಯಿ ಮರಿಗೆ ಹೋಲಿಸುವ ಮುನ್ನ ಸಿದ್ದರಾಮಯ್ಯ ಅವರು ತಮ್ಮ ಹೈಕಮಾಂಡ್‌ನ ನಾಯಕರ ಮುಂದೆ ನಡೆದುಕೊಳ್ಳುವ ಪರಿಯನ್ನ ಪರಾಮರ್ಶಿಸಿಕೊಳ್ಳಬೇಕು. ಅಲ್ಲದೇ, ಸಾರ್ವಜನಿಕವಾಗಿ ಕ್ಷಮೆ ಕೇಳುವ ಮೂಲಕ ಸಾಂವಿಧಾನಿಕ ಹುದ್ದೆಗೆ ಹಾಗೂ ಜನಪ್ರಿಯ ಮುಖ್ಯಮಂತ್ರಿಗಳಿಗೆ ತೋರಿಸಿದ ಅಪಮಾನವನ್ನು ತಿದ್ದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
https://pragati.taskdun.com/hatric-hero-shivraj-kumar-visits-belagavi/
ಟಿಆರ್ಎಫ್ ‘ಉಗ್ರ ಸಂಘಟನೆ’ ಎಂದು ಘೋಷಿಸಿದ ಕೇಂದ್ರ ಸರ್ಕಾರ
https://pragati.taskdun.com/the-central-government-has-declared-the-trf-a-terrorist-organisation/
*ಹೆಚ್ಚಿದ ಶೀತಗಾಳಿ, ದಟ್ಟ ಮಂಜು: ರೈಲು ಸಂಚಾರದಲ್ಲಿ ವ್ಯತ್ಯಯ*
https://pragati.taskdun.com/north-indiacold-wavedelhi-records-lowest-temp-in-two-years/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ