ಪೊಲೀಸರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, “ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲು ತೀರ್ಮಾನಿಸಿ ಇಂದು ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಕಳೆದ ವರ್ಷದ ಸೆಪ್ಟೆಂಬರ್ ನಿಂದ ಈ ವರ್ಷದ ಆಗಸ್ಟ್ ವರೆಗೆ 16 ಜನ ಹಾಗೂ ದೇಶದಲ್ಲಿ 180 ಜನ ರಕ್ಷಣಾ ಸಿಬ್ಬಂದಿ ಹುತ್ಮಾತರಾಗಿದ್ದು, ಅವರೆಲ್ಲರನ್ನು ಸ್ಮರಿಸಿ ನಮನ ಸಲ್ಲಿಸಲಾಗಿದೆ. ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ಕುಟುಂಬದವರಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ