Latest

ಬಿಎಸ್ ವೈ ಆಪ್ತನ ನಿವಾಸ ಸೇರಿ 50 ಕಡೆಗಳಲ್ಲಿ ಐಟಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಐಟಿ ಅಧಿಕಾರಿಗಳು ರಾಜಕಾರಣಿಗಳ ಆಪ್ತರು, ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕರ್ನಾಟಕ, ಗೋವಾ ವಿಭಾಗದ 300 ಐಟಿ ಅಧಿಕಾರಿಗಳು ಬೆಂಗಳೂರಿನ 50 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪ್ರಮುಖವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕನಾಗಿದ್ದ ಉಮೇಶ್ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆದಿದೆ.

Home add -Advt

ಉಮೇಶ್ ಅವರ ಭಾಷ್ಯಂ ಸರ್ಕಲ್ ನಲ್ಲಿರುವ ಮನೆ, ಕಚೇರಿ ಸೇರಿ ಅವರಿಗೆ ಸೇರಿದ್ದ 4 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹಾನಗಲ್ ಉಪಚುನಾವಣೆ; ಉದಾಸಿ ಕುಟುಂಬಕ್ಕೆ ಬಿಜೆಪಿ ಬಿಗ್ ಶಾಕ್

Related Articles

Back to top button