
ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತರ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತರು ಎನ್ನಲಾದ ಎಲೆಕ್ಟ್ರಿಕ್ ಗುತ್ತಿಗೆದಾರರಾಗಿರುವ ಜೀತು ಹಾಗೂ ಕೊಠಾರಿ ಎಂಬುವವರ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.
ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.