
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಾಯುಕ್ತ ದಾಳಿ ಬೆನ್ನಲ್ಲೇ ಇದೀಗ ಐಟಿ ದಾಳಿ ಶುರುವಾಗಿದ್ದು, ಬೆಂಗಳೂರಿನಲ್ಲಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ವಿವಿಧೆಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ವಂಚನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಐಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವವರ ಅಪಾರ್ಟ್ ಮೆಂಟ್ ಮೇಲೆ 6 ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ