Latest

*ಕಾಂಗ್ರೆಸ್ ಮುಖಂಡರ ಮನೆ ಮೇಲೆ IT ದಾಳಿ*

ಪ್ರಗತಿವಾಹಿನಿ ಸುದ್ದಿ: ಕಲಬುರ್ಗಿ: ವಿಧಾನಸಭಾ ಚುನಾವಣೆಗೆ ಮೂರು ದಿನಗಳು ಬಾಕಿಯಿದ್ದು, ಕಾಂಗ್ರೆಸ್ ನಾಯಕರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಶಾಸಕ ಪ್ರಿಯಾಂಕ್ ಖರ್ಗೆ ಆಪ್ತ, ಮಾಜಿ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಲಬುರ್ಗಿಯಲ್ಲಿ ಅರವಿಂದ್ ಚೌಹಾಣ್ ಅವರ ಮನೆ, ಜಲ್ಲಿ ಕ್ರಷರ್, ಹೋಟೆಲ್ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಹಾವೇರಿ ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆಯೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಾವೇರಿಯ ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ನಿನ್ನೆ ಕಲಬುರ್ಗಿಯ ರಿಯಲ್ ಎಸ್ಟೇಟ್ ಉದ್ಯಮಿ ವಾಹೇದ್ ಅಲಿ ಬಾತೆಖಾನಿ ನಿವಾಸದ ಮೇಲೆ ತೆರಿಗೆ ಅಧಿಕರಿಗಳು ದಾಳಿ ನಡೆಸಿದ್ದರು.

Home add -Advt
https://pragati.taskdun.com/karnatakarainmocha-cyclone/


Related Articles

Back to top button