ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷ ನಾಯಕರು ಮತದಾರರ ಓಲೈಕೆಗಾಗಿ ಭಾರಿ ಕಸರತ್ತು ನಡೆಸಿದ್ದಾರೆ. ಈ ನಡುವೆ ಕಲಬುರ್ಗಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಬರೋಬ್ಬರಿ 2 ಕೋಟಿ ರೂಪಾಯಿ ಹಣವನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಲಬುರ್ಗಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ.
ರೈಲಿನಿಂದ ಇಳಿದು ಬಂದ ವ್ಯಕ್ತಿ ಹಣವನ್ನು ತೆಗೆದುಕೊಂಡು ಕಾರು ಹತ್ತಿದ್ದರು. ಕಾರಿನಲ್ಲಿ ಹಣ ಸಾಗಿಸುತ್ತಿದ್ದಾಗ ಐಟಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಕಲಬುರ್ಗಿ ಮಾಜಿ ಮೇಯರ್ ಗೆ ಸಂಬಂಧಿಸಿದ ಹಣ ಇದಾಗಿದೆ ಎಂದು ಹೇಳಲಾಗುತ್ತಿದೆ. 2 ಕೋಟಿ ಹಣದ ಜೊತೆಗೆ ಕಾರನ್ನು ಕೂಡ ಅಧಿಕಾರಿಗಳು ಸೀಜ್ ಮಾಡಿದ್ದು, ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ