ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ 30ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಉದ್ಯಮಿಗಳ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಳಿಗ್ಗೆ 7 ಗಂಟೆಗೆ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರೆಗೆ ಮರೆ ಮಾಚಿದ ಆರೋಪ ಹಿನ್ನೆಲೆಯಲ್ಲಿ ಗೋವಾ ಹಾಗೂ ಕರ್ನಾಟಕದ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಂಬಸ್ಸಿ ಆರ್ಕೆಡ್ ಅಪಾರ್ಟ್ ಮೆಂಟ್ ನ ನರಪತ್ ಸಿಂಗ್ ಚರೋಡಿ ಎಂಬುವವರ ಫ್ಲಾಟ್ ನಂ 602ರ ಮೇಲೆ ದಾಳಿ ನಡೆಸಿರುವ ನಾಲ್ವರು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದಲ್ಲಿ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
8 ತಿಂಗಳ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ