LatestUncategorized

*ಚುನಾವಣೆ ಹೊತ್ತಲ್ಲೇ ಐಟಿ ಶಾಕ್; ಕೆಜಿ ಎಫ್ ಬಾಬು ಸೇರಿದಂತೆ ಹಲವರ ಮನೆ ಮೇಲೆ ರೇಡ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ 20 ದಿನಗಳು ಬಾಕಿಯಿದ್ದು, ರಾಜಕೀಯ ನಾಯಕರು ಒಂದೆಡೆ ಭರಾಟೆ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನೊಂದೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಯಕರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕೆಜಿ ಎಫ್ ಬಾಬು ನಿವಾಸ ಸೇರಿದಂತೆ 50 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Home add -Advt

ಹೈಗ್ರೌಂಡ್ಸ್ ವ್ಯಾಪ್ತಿಯಲ್ಲಿರುವ ಕೆಜಿಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರು, ಮಂಗಳೂರಿನಲ್ಲಿಯೂ ಐಟಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

Related Articles

Back to top button